Index   ವಚನ - 888    Search  
 
ಅಂಗಪ್ರಸಾದಿ ಆತ್ಮದ್ರೋಹಿ, ಲಿಂಗಪ್ರಸಾದಿ ಲಿಂಗದ್ರೋಹಿ, ಜಂಗಮಪ್ರಸಾದಿ ಜಂಗಮದ್ರೋಹಿ ಎಂದುದಾಗಿ, ಭಾವದಿಂದ ಪ್ರಸಾದವ ಕೊಂಡು, ಅನುಭಾವದಿಂದತಿಗಳೆದಡೆ ಅದು ಪ್ರಸಾದವಲ್ಲ, ಮಾಂಸ, ಇದು ಕಾರಣ-ಕೂಡಲಚೆನ್ನಸಂಗಯ್ಯನಲ್ಲಿ ಪ್ರಸಾದಸಂಪತ್ತ ಬಸವಣ್ಣನೆ ಬಲ್ಲ.