Index   ವಚನ - 904    Search  
 
ಅಂತರಂಗದಲ್ಲಿ ಅರಿವಾದಡೇನಯ್ಯಾ ಬಹಿರಂಗದಲ್ಲಿ ಕ್ರೀ ಇಲ್ಲದನ್ನಕ್ಕ? ದೇಹವಿಲ್ಲದಿರ್ದಡೆ ಪ್ರಾಣಕ್ಕಾಶ್ರಯವುಂಟೆ? ಕನ್ನಡಿಯಿಲ್ಲದಿರ್ದಡೆ ತನ್ನ ಮುಖವ ಕಾಣಬಹುದೆ? ಸಾಕಾರ ನಿರಾಕಾರ ಏಕೋದೇವ, ನಮ್ಮ ಕೂಡಲಚೆನ್ನಸಂಗಯ್ಯನು.