Index   ವಚನ - 908    Search  
 
ಅಂಧಕನು ಓಡ ಹಿಡಿದು ತನ್ನ ಸ್ವರೂಪವ ತಾ ನೋಡುವಂತೆ, ಶೈವ ಗುರುವಿನಲ್ಲಿ ಲಿಂಗ ಸಾಹಿತ್ಯವಾದ ಶಿಷ್ಯನ ವಿಧಿಯ ನೋಡಿರೆ! ಗುರುವಿಂಗೆ ದೂರಾರ್ಚನೆ, ಶಿಷ್ಯಂಗೆ ಇಷ್ಟಲಿಂಗಾರ್ಚನೆ, ಗುರು ವಾಯುಪ್ರಾಣಿ, ಶಿಷ್ಯ ಲಿಂಗಪ್ರಾಣಿ, ಗುರು ಭೂತದೇಹಿ, ಶಿಷ್ಯ ಲಿಂಗದೇಹಿ, ಗುರು ಅನರ್ಪಿತಭುಂಜಕ, ಶಿಷ್ಯ ಲಿಂಗಾರ್ಪಿತಭುಂಜಕ, ಗುರು ಅಗ್ನಿದಹನಸಂಪತ್ತು, ಶಿಷ್ಯ ಸಿದ್ಧಸಮಾಧಿಸಂಪತ್ತು, ಎಂತುಂಟು ಹೇಳಿರಣ್ಣಾ? "ಜ್ಞಾನಹೀನಗುರೌ ಪ್ರಾಪ್ತೇ ಶಿಷ್ಯಜ್ಞಾನಂ ನ ಸಿಧ್ಯತಿ| ಮೂಲಚ್ಛಿನ್ನೇ ಯಥಾ ವೃಕ್ಷೇ ಕಥಂ ಪುಷ್ಪಂ ಫಲಂ ಭವೇತ್"|| ಎಂದುದಾಗಿ ಇವರಿಬ್ಬರ ಗುರುಶಿಷ್ಯಸಂಬಂಧಕ್ಕೆ ನರಕ ತಪ್ಪದು ಕಾಣಾ ಕೂಡಲಚೆನ್ನಸಂಗಮದೇವಾ.