Index   ವಚನ - 946    Search  
 
ಅಯ್ಯಾ ಎನಗೆ ವಿಭೂತಿಯೆ ಕುಲದೈವ; ಅಯ್ಯಾ ಎನಗೆ ವಿಭೂತಿಯೆ ಮನೆದೈವ; ಅಯ್ಯಾ ಎನಗೆ ವಿಭೂತಿಯೆ ಸರ್ವಕಾರಣ; ಅಯ್ಯಾ ಎನಗೆ ವಿಭೂತಿಯೆ ಸರ್ವಸಿದ್ಧಿ; ಅಯ್ಯಾ ಎನಗೆ ವಿಭೂತಿಯೆ ಸರ್ವವಶ್ಯ; ಅಯ್ಯಾ ಕೂಡಲಚೆನ್ನಸಂಗಮದೇವಾ ಶ್ರೀಮಹಾಭೂತಿಯೆಂಬ ಪರಂಜ್ಯೋತಿ ನೀವಾದಿರಾಗಿ, ಎನಗೆ ವಿಭೂತಿಯೆ ಸರ್ವಸಾಧನ,