Index   ವಚನ - 951    Search  
 
ಅಯ್ಯಾ, ಘನಗಂಭೀರವಪ್ಪ ಸಮುದ್ರದೊಳಗೊಂದು ರತ್ನ ಹುಟ್ಟಿದಡೆ, ಆ ಸಮುದ್ರದೊಳಗಡಗಿರ್ಪುದಲ್ಲದೆ ಘನವಾಗಿ ತೋರಬಲ್ಲುದೆ? ನಿಮ್ಮ ಕರುಣಕಟಾಕ್ಷದಿಂದುದಯಿಸಿ, ಶಾಸ್ತ್ರಾಗಮ ಅನಂತ ಪುರಾಣವೆಲ್ಲವು ನಿಮ್ಮ ಕೃಪೆಯಿಂದ ಸಾಧ್ಯವಾಯಿತ್ತೆನಗೆ. ಆದಿಯನಾದಿ ಇಲ್ಲದಂದು ನೀನೊಬ್ಬನೆ ಪ್ರಸಾದಿ. ಉಮೆಯ ಕಲ್ಯಾಣವಿಲ್ಲದಂದು ನೀನೊಬ್ಬನೆ ಪ್ರಸಾದಿ. ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ ಬಸವಣ್ಣಾ, ನಿಮ್ಮ ತೊತ್ತಿನ ತೊತ್ತಿನ ಮರುದೊತ್ತಿನ ಕಂದನಾಗಿರ್ದೆನಯ್ಯಾ.