Index   ವಚನ - 955    Search  
 
ಅಯ್ಯಾ ನಿಮ್ಮ ಶರಣನು ಮೂರ್ತನಲ್ಲ ಅಮೂರ್ತನಲ್ಲ. ಲಿಂಗದಲ್ಲಿ ಪ್ರಾಣಸಂಚಿತ, ಪ್ರಾಣದಲ್ಲಿ ಪ್ರಸಾದ ಸಂವರಣೆ, ಪ್ರಸಾದದಲ್ಲಿ ಕಾಯಾಶ್ರಿತನು. ಲೋಕಲೌಕಿಕದ ಪ್ರಕಾರದುದಯನಲ್ಲ ಕೂಡಲಚೆನ್ನಸಂಗಾ ನಿಮ್ಮ ಶರಣನು.