Index   ವಚನ - 969    Search  
 
ಅರಸುವಂಗೆ ಅರಸುವಂಗೆ ಅರಕೆ ತಾನಹುದು, ದೇವಾ! ಬಯಸುವಂಗೆ ಬಯಸುವಂಗೆ ಬಯಕೆ ತಾನಹುದು, ದೇವಾ! ನೀವು ಭಾವಿಸಿದಂತಲ್ಲದೆ ಬೇರೊಂದಾಗಬಲ್ಲುದೆ? ಈರೇಳು ಭುವನಸ್ಥಾಪ್ಯ ಪ್ರಾಣಿಗಳೆಲ್ಲ ನಿಮ್ಮಿಂದಲಾದವಾಗಿ. ನಿಮ್ಮಿಂದಲಹುದಾಗದೆಂಬ ಸಂದೇಹವುಂಟೆ ಬಸವಣ್ಣ? ನಿಮ್ಮಡಿಗಳೆಂದಂತೆ, ನೆನೆದಂತೆ, ನೋಡಿದಂತೆ, ತಪ್ಪದು. ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ ಪ್ರಭುವಿನಾಣೆ ಕಟ್ಟು ಗುಡಿಯನು.