Index   ವಚನ - 970    Search  
 
ಅರಿವರತು ಕುರುಹು ನಷ್ಟವಾದ ಬಳಿಕ ಕುರುಹಿನ ಬಣ್ಣ ಅಂಗದ ಮೇಲೇಕೊ ಘಟ್ಟಿವಾಳಂಗೆ? ಅರಿವನಾರು? ಅರುಹಿಸಿಕೊಂಬನಾರು? ಬರಿಯ ಬಯಲು ಕಾಣಾ, ಕೂಡಲಚೆನ್ನಸಂಗಾ ನಿಮ್ಮ ಶರಣ ಘಟ್ಟಿವಾಳನಲ್ಲದೆ ನೆರೆ ಅರಿವರಾರೊ?