Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 1019 
Search
 
ಆನೆಯನೇರಿದ ಮಾವತಿಗ ಚಕ್ರೇಶ್ವರನಾಗಬಲ್ಲನೆ ಅಯ್ಯಾ? ವೇದಾಗಮಶಾಸ್ತ್ರ ಪುರಾಣಂಗಳನೋದಿ ಕೇಳಿ, ನಡೆ ನುಡಿ ಪೂರಾಯವಾದ ಪುರಾತನರಾಗಬಲ್ಲರೆ ಅಯ್ಯಾ? ಅದೆಂತೆಂದಡೆ; `ಪೂರ್ಣಶ್ಚ ಪುರಾತನಃʼ ಎಂದುದಾಗಿ. ತೊತ್ತು ಲಕ್ಷಣವಿರಲು, ನಾಣ್ಯವ ನುಡಿಸಿ, ನವರತ್ನಾಭರಣಂಗಳ ತೊಡಿಸಿ, ದಂಡಿಗೆಯನೇರಿಸಲು `ಶಂಕರಸ್ಯ ಯಥಾ ಗೌರೀ' ಎನಿಸಿಕೊಳ್ಳಬಲ್ಲಳೆ ಅಯ್ಯಾ? ಖ್ಯಾತಿಗಾಗಿ ನಿಜತತ್ತ್ವಂಗಳನೋದಿ ಕೇಳಿ ಹೇಳಿದಡೇನು? ಅದಕ್ಕೆ ತಕ್ಕ ಅರಿವು ಆಚಾರ ನಡೆನುಡಿಯಲ್ಲಿ ನಿರ್ಣಯವಿಲ್ಲದಿರ್ದಡೆ ಕುಂಭೀಪಾತಕ ನಾಯಕನರಕ ತಪ್ಪದು- ಕೂಡಲಚೆನ್ನಸಂಗಮದೇವಾ.
Art
Manuscript
Music
Your browser does not support the audio tag.
Courtesy:
Video
Transliteration
Āneyanērida māvatiga cakrēśvaranāgaballane ayyā? Vēdāgamaśāstra purāṇaṅgaḷanōdi kēḷi, naḍe nuḍi pūrāyavāda purātanarāgaballare ayyā? Adentendaḍe; `pūrṇaśca purātanaḥʼ endudāgi. Tottu lakṣaṇaviralu, nāṇyava nuḍisi, navaratnābharaṇaṅgaḷa toḍisi, daṇḍigeyanērisalu `śaṅkarasya yathā gaurī' enisikoḷḷaballaḷe ayyā? Khyātigāgi nijatattvaṅgaḷanōdi kēḷi hēḷidaḍēnu? Adakke takka arivu ācāra naḍenuḍiyalli nirṇayavilladirdaḍe kumbhīpātaka nāyakanaraka tappadu- kūḍalacennasaṅgamadēvā.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Transliteration
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: