Index   ವಚನ - 1117    Search  
 
ಕಬ್ಬನಗಿದ ಗಾಣ ಬಲ್ಲುದೆ ಹಾಲ ಸವಿಯ? ಗಗನದಲ್ಲಾಡುವ ಪಕ್ಷಿ ಬಲ್ಲುದೆ ರವಿಯ ನಿಲವ? ಹಗರಣಕ್ಕೆ ಪೂಜಿಸುವರು ಬಲ್ಲರೆ ನಮ್ಮ ಶರಣರ ಸುಳುಹ? ನಡುಮುರಿದು ಗುಡುಗೂರಿದಡೇನು ಲಿಂಗದ ನಿಜವನರಿಯದನ್ನಕ್ಕ? ಸಾವನ್ನಕ್ಕ ಜಪವ ಮಾಡಿದಡೇನು ಲಿಂಗದ ಪ್ರಾಣ ತನ್ನ ಪ್ರಾಣ ಒಡಗೂಡದನ್ನಕ್ಕ? ಇಂತಿವರೆಲ್ಲರು ಅಭ್ಯಾಸಶಕ್ತಿಗರುಹಿಗರು! ನಮ್ಮ ಕೂಡಲಚೆನ್ನಸಂಗಯ್ಯನಲ್ಲಿ ಮಾಯಾಕೋಳಾಹಳ ಸಿದ್ಧರಾಮಯ್ಯದೇವರಿಗೆ ಅಹೋರಾತ್ರಿಯಲ್ಲಿ ನಮೋ ನಮೋ ಎಂದು ಬದುಕಿದೆನು ಕಾಣಾ ಪ್ರಭುವೆ.