Index   ವಚನ - 1152    Search  
 
ಕಿರಿದಾದ ಬೀಜದಲ್ಲಿ ಹಿರಿಯ ತರುವಡಗಿದ ಪರಿಯಂತೆ, ಕರಗತವಾದ ಕನ್ನಡಿಯಲ್ಲಿ ಕರಿಗಿರಿಗಳು ತೋರುವ ಪರಿಯಂತೆ, ಜಗದ್ವ್ಯಾಪಕವಾದ ಪರವಸ್ತುವು ಖಂಡಿತಾಕಾರಮಾದ ಶರೀರದಲ್ಲಿ ಅತಿ ಸೂಕ್ಷ್ಮ ಪ್ರಮಾಣದಲ್ಲಿರ್ಪಂತೆ, ಪರತರಶಿವಲಿಂಗವು ಸದ್ಭಕ್ತರನುದ್ಧರಿಪ ಸದಿಚ್ಛೆಯಿಂದ ಲಿಂಗಾಕಾರವಾಗಿ ನೆಲೆಗೊಂಡಿರ್ಪುದು. `ಅಣೋರಣೀಯಾನ್ ಮಹತೋ ಮಹೀಯಾನ್' ಎಂದುದಾಗಿ, ಪರಬ್ರಹ್ಮರೂಪವಾದ ಲಿಂಗವು, ಮಹದ್ರೂಪದಿಂದ ಅಖಂಡವಾಗಿಯೂ ಅಣುರೂಪದಿಂದ ಖಂಡಿತವಾಗಿಯೂ ತೋರುವುದು. ಕೂಡಲಚೆನ್ನಸಂಗಮದೇವಾ, ಇದು ನಿಮ್ಮ ದಿವ್ಯಲೀಲೆಯಯ್ಯಾ.