Index   ವಚನ - 1168    Search  
 
ಕ್ರಿಯೆಯೆ ಜ್ಞಾನ, ಆ ಜ್ಞಾನವೆ ಕ್ರಿಯೆ. ಜ್ಞಾನವೆಂದಡೆ ತಿಳಿಯುವುದು, ಕ್ರಿಯೆಯೆಂದಡೆ ತಿಳಿದಂತೆ ಮಾಡುವುದು ಪರಸ್ತ್ರೀಯ ಭೋಗಿಸಬಾರದೆಂಬುದೆ ಜ್ಞಾನ; ಅದರಂತೆ ಆಚರಿಸುವುದೆ ಕ್ರಿಯೆ. ಅಂತು ಆಚರಿಸದಿದ್ದಡೆ ಅದೆ ಅಜ್ಞಾನ ನೋಡಾ, ಕೂಡಲಚೆನ್ನಸಂಗಮದೇವಾ.