Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 1184 
Search
 
ಗುರುಜಂಗಮದ ಪಾದತೀರ್ಥವೆ ಪವಿತ್ರವೆಂದು ತಿಳಿದು ಲಿಂಗಾಭಿಷೇಕಂಗೆಯ್ವುದಯ್ಯಾ. ಆ ಗುರುಲಿಂಗ ಜಂಗಮದಲ್ಲಿ ಭೇದವ ಕಲ್ಪಿಸಿದಡೆ ಪಾಪವು ಸಂಘಟಿಸುವುದಯ್ಯಾ. ಮನುಷ್ಯನ ಕಾಲ್ದೊಳೆದ ನೀರು ಪರಮತೀರ್ಥವೆಂದು ಭಾವಿಸಿ ಲಿಂಗಕ್ಕೆರೆವುದು ಶಾಸ್ತ್ರಾಚಾರಕ್ಕೆ ವಿರೋಧ-ಎಂಬ ಕುಹಕಿಗಳ ಕೀಳ್ನುಡಿಯ ಕೇಳಲಾಗದಯ್ಯಾ. "ಗುರುರ್ಲಿಂಗಜಂಗಮಾಶ್ಚ ತ್ರಿತಯಂ ಚೈಕಮೇವ ಹಿ ಅತ ಏವ ಪದೋದಾಭಿಷೇಚನಂ ಶಿವಲಿಂಗಕೇ ಕುರ್ವಂತ್ಯಭೇದದೃಷ್ಟ್ಯಾ ಚ ಭೇದಕೃತ್ಪಾಪಮಶ್ನುತೇ" ಎಂದುದಾಗಿ ಇಂತಿಪ್ಪುದನಾರಯ್ಯದೆ ಗಳಹುವ ಮಂದಮತಿಗಳ ಎನ್ನತ್ತ ತೋರದಿರಯ್ಯಾ ಕೂಡಲಚೆನ್ನಸಂಗಮದೇವಾ.
Art
Manuscript
Music
Your browser does not support the audio tag.
Courtesy:
Video
Transliteration
Gurujaṅgamada pādatīrthave pavitravendu tiḷidu liṅgābhiṣēkaṅgeyvudayyā. Ā guruliṅga jaṅgamadalli bhēdava kalpisidaḍe pāpavu saṅghaṭisuvudayyā. Manuṣyana kāldoḷeda nīru paramatīrthavendu bhāvisi liṅgakkerevudu śāstrācārakke virōdha-emba kuhakigaḷa kīḷnuḍiya kēḷalāgadayyā. Gururliṅgajaṅgamāśca tritayaṁ caikamēva hi ata ēva padōdābhiṣēcanaṁ śivaliṅgakē kurvantyabhēdadr̥ṣṭyā ca bhēdakr̥tpāpamaśnutē endudāgi intippudanārayyade gaḷahuva mandamatigaḷa ennatta tōradirayyā kūḍalacennasaṅgamadēvā.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Transliteration
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: