Index   ವಚನ - 1234    Search  
 
ಚಂದ್ರಶಿಲೆಯಲ್ಲಿ ಪಾವಕ ಹುಟ್ಟಿ, ಈಡಾ ಪಿಂಗಳ ಮಧ್ಯದಲ್ಲಿ ಅನಿಲ ತುಂಬಿ, ಅರಿದರಿದು! ನಿಮ್ಮ ನೆನೆವ ಪರಿಕರ ಹೊಸತು! ಅರಿವಡೆ ತಲೆಯಿಲ್ಲ, ಹಿಡಿವಡೆ ಮುಡಿಯಿಲ್ಲ! ಕೂಡಲಚೆನ್ನಸಂಗಮದೇವಾ ನಿಮ್ಮ ಶರಣನ ಪರಿಯಿಂತುಟು; ಅರಿದರಿದು!