Index   ವಚನ - 1236    Search  
 
ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವನಂತಪ್ಪ ನಿಧಾನ ದೊರಕಿತ್ತೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವನಂತಪ್ಪ ಪರುಷ ದೊರಕಿತ್ತೆನಗೆ. ಚೆನ್ನಸಂಗಾ ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವನಂತಪ್ಪ ಕಾಮಧೇನು ದೊರೆಯಿತ್ತೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವನಂತಪ್ಪ ಸುರತರು ದೊರಕಿತ್ತೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ತ್ರಿವಿಧ ತ್ರಿವಿಧ[ದ] ಮೊದಲನೆ ತೋರಿದ ಬಸವಣ್ಣನೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವಣ್ಣನಿಂದ ನೀವಾದಿರಾಗಿ, ಕೂಡಲಚೆನ್ನಸಂಗಯ್ಯನಲ್ಲಿ ಪ್ರಸಾದಿಯ ಪ್ರಸಾದಿಯಾದೆನು.