Index   ವಚನ - 1253    Search  
 
ಜಲನಿಧಿ ತಟಾಕದಲ್ಲಿ ಕನ್ನವನಿಕ್ಕಿ ಉದಕವ ತಂದು ಮಜ್ಜನಕ್ಕೆರೆವರೆಲ್ಲ ಶೀಲವಂತರೆ? ಭವಿಪಾಕವನೊಲ್ಲೆವೆಂದು ಭುಂಜಿಸುವ ಉದರಪೋಷಕರೆಲ್ಲ ಶೀಲವಂತರೆ? ಅವರಲ್ಲ, ನಿಲ್ಲು ಮಾಣು. ಅಶನವರತು ವ್ಯಸನ ಬೆಂದು ವ್ಯಾಪ್ತಿಗಳು ಅಲ್ಲಿಯೆ ಲೀಯವಾಗಿ ಅಷ್ಟಮದ ಬೆಂದು ನಷ್ಟವಾಗಿ, ತನುಗುಣ ಸಮಾಧಾನವಾದಡೆ ಕೂಡಲಚೆನ್ನಸಂಗಯ್ಯನಲ್ಲಿ ಅಚ್ಚಶೀಲವೆಂಬೆ.