Index   ವಚನ - 1273    Search  
 
ತನ್ನ ಲಿಂಗಕ್ಕೆ ಮಾಡಿದ ಬೋನವ ಜಂಗಮಕ್ಕೆ ನೀಡಬಾರದೆಂಬುದನೇಕ ನರಕ! ತನ್ನ ಲಿಂಗವಾರೋಗಿಸಿ ಮಿಕ್ಕ ಪ್ರಸಾದವ ಜಂಗಮಕ್ಕೆ ನೀಡುವುದನೇಕ ನಾಯಕನರಕ. ಆ ಜಂಗಮವಾರೋಗಿಸಿ ಮಿಕ್ಕ ಪ್ರಸಾದ, ಎನ್ನ ಲಿಂಗಕ್ಕೆ ಬೋನವಾಯಿತ್ತು, ಎನಗೆ ಪ್ರಸಾದವಾಯಿತ್ತು. ಕೂಡಲಚೆನ್ನಸಂಗಯ್ಯಾ, ಎನಗೆಯೂ ನಿನಗೆಯೂ ಜಂಗಮಪ್ರಸಾದ ಪ್ರಾಣವಾಯಿತ್ತು.