Index   ವಚನ - 1282    Search  
 
ತನು ನಿಮ್ಮನಪ್ಪಿ ಮಹಾತನುವಾದ ಬಳಿಕ ತನುವೆಂಬುದು ಮತ್ತೆಲ್ಲಿಯದೊ? ಮನ ನಿಮ್ಮನಪ್ಪಿ ಘನಮನವಾದ ಬಳಿಕ ಮನವೆಂಬುದು ಮತ್ತೆಲ್ಲಿಯದೊ? ಭಾವ ನಿಮ್ಮನಪ್ಪಿ ನಿರ್ಭಾವವಾದ ಬಳಿಕ ಭಾವವೆಂಬುದು ಮತ್ತೆಲ್ಲಿಯದೊ? ಇಂತೀ ತ್ರಿವಿಧವು ಲಿಂಗದಲ್ಲಿ ನಿರ್ಲೇಪವಾಗಿ ಮೈದೋರದಿರವ, ಕೂಡಲಚೆನ್ನಸಂಗಯ್ಯ ತಾನೆ ಬಲ್ಲ.