Index   ವಚನ - 1294    Search  
 
ತಾನೆ ಜಗ, ಜಗವೆಲ್ಲ ತಾನೆಂದರಿದ ಘನವೇದ್ಯನಭೇದರೂಪನಾಗಿ, ಅನ್ಯವಿಲ್ಲದನ್ಯವನರಿಯಲೆಲ್ಲಿಯದೊ? ನಿರಂಜನ ನಿಜ ಚಿದ್ರೂಪು ತಾನಾಗಿ ಅರಿವು ತಾನೆಂಬ ಮಾತಿಗೆಡೆಯಲ್ಲಿಯದೊ? ಅನ್ಯವೆನ್ನದ ತಾನೆನ್ನದಳಿದುಳಿಮೆಯನುಪಮಿಸಬಹುದೆ? ಅನಪಮಸುಖಸಾರಾಯ, ಕೂಡಲಚೆನ್ನಸಂಗಾ ನಿಮ್ಮ ಶರಣ.