Index   ವಚನ - 1298    Search  
 
ತಿಳಿದುಪ್ಪ ಗಟ್ಟಿದುಪ್ಪಕ್ಕೆ ಭೇದವುಂಟೆ? ದೀಪಕ್ಕೆ ದೀಪ್ತಿಗೆ ಭಿನ್ನವುಂಟೆ? ಆತ್ಮಕ್ಕೆಯೂ ದೇಹಕ್ಕೆಯೂ ಸಂದುಂಟೆ? ಕ್ಷೀರಕ್ಕೆಯೂ ಸ್ವಾದಕ್ಕೆಯೂ ಭೇದವುಂಟೆ? ಇದು ಕಾರಣ, ಸಾಕಾರವೆ ನಿರಾಕಾರವೆಂದರಿದು; ಅಂಗಲಿಂಗಸಂಬಂಧವಿಲ್ಲದವರ ಸಂಗ ಭಂಗವೆಂದು ಕೂಡಲಚೆನ್ನಸಂಗಯ್ಯನ ಶರಣರು ಮೆಚ್ಚರಯ್ಯಾ ಪ್ರಭುವೆ.