Index   ವಚನ - 1303    Search  
 
ತೆರಹಿಲ್ಲದ ಮಹಾಘನ ಪರಿಪೂರ್ಣ ಲಿಂಗಭರಿತವೆಂದೇ ಭಾವಿಸಿ, ಪೂಜಿಸಿ, ಮರಳಿ ಬಿದ್ದಿತ್ತು ಕೆಡೆಯಿತ್ತು ಎಂಬ ಅಜ್ಞಾನವ ನೋಡಾ! ತೆರಹಿಲ್ಲದ ಪರಿಪೂರ್ಣಲಿಂಗವು, ಬೀಳಲಿಕ್ಕೆ ತೆರಹುಂಟೆ? ಅರಿಯರು ಪ್ರಾಣಲಿಂಗದ ನೆಲೆಯನು. ಅರಿಯದೆ ಅಜ್ಞಾನದಲ್ಲಿ ಕುರುಹು ಬಿದ್ದಿತ್ತೆಂದು ಪ್ರಾಣಘಾತವ ಮಾಡಿಕೊಂಡು ಸಾವ ಅಜ್ಞಾನಿಗಳ ನೋಡಾ! ಅರಿದು ಕೂಡಿ ಸ್ವಯವಾಗಿರ್ದ ಲಿಂಗವು ಓಸರಿಸಿತ್ತೆಂದು ಆ ಲಿಂಗದೊಡನೆ ಪ್ರಾಣಘಾತವ ಮಾಡಿಕೊಂಡು ಸಾವ ಅಜ್ಞಾನಿಗಳಿಗೆ ಅಘೋರ ನರಕ ತಪ್ಪದು ಕಾಣಾ ಕೂಡಲಚೆನ್ನಸಂಗಮದೇವಾ.