Index   ವಚನ - 1337    Search  
 
ನಾಲ್ಕು ವೇದವನೋದಿದ ವಿಪ್ರರ ಮನೆಯ ಎಣ್ಣೆ ಹೋಳಿಗೆ ತುಪ್ಪ ಸಕ್ಕರೆ ಎಂದಡೆ ನಮ್ಮ ಶಿವಭಕ್ತರ ಮನೆಯ ಶ್ವಾನ, ಮೂಸಿನೋಡಿ ಒಲ್ಲದೆ ಹೋಯಿತ್ತು. ಅದೆಂತೆಂದಡೆ: ಸಾಮವೇದಿ ಹೋಗುತ್ತಿರಲು ಶ್ವಪಚಯ್ಯಗಳು, ತಮ್ಮ ಪಾಕಕ್ಕೆ ಪಾದರಕ್ಷೆಯ ತೆರೆಯ ಹಿಡಿದಿದ್ದರಾಗಿ. ಆ ಶ್ವಾನನೆ ಶುಚಿಯೆಂದು ಹಾಕಿದ ಮುಂಡಿಗೆಯ ಆರಾದಡೂ ಎತ್ತುವಿರೊ, ಜಗದ ಸಂತೆಯ ಸೂಳೆಯ ಮಕ್ಕಳಿರಾ? ಜಗಕ್ಕೆ ಪಿತನೊಬ್ಬನೆ ಅಲ್ಲದೆ ಇಬ್ಬರೆಂದು ಬೊಗಳುವನ ಬಾಯಲ್ಲಿ ನಮ್ಮ ಪಡಿಹಾರಿ ಉತ್ತಣ್ಣಗಳ ಎಡದ ಪಾದರಕ್ಷೆಯ ಅವನಂಗಳ ಮೆಟ್ಟಿಕ್ಕುವೆನೆಂದ ಕೂಡಲಚೆನ್ನಸಂಗಮದೇವ.