Index   ವಚನ - 1362    Search  
 
ಪಂಚೇಂದ್ರಿಯಂಗಳು ಲಿಂಗಲಿಕ್ತದಲ್ಲಿಂದ ಹರಿವ ಸಂಚವನರಿಯದೆ, ತೋಟದ ಕೊಜೆಯನಾಗಿ ಕರಣಂಗಳ ಮೇಲೆ ಮಣಿಹವಾಗಿ ಬಂದೆನಯ್ಯಾ, ಯೋಗಿ ವಿಯೋಗಿಯಾಗಿ ಕುಂಡಲಿಯನೆ ಬಿಗಿದು, ಮಡದಲ್ಲಿ ಇಂದ್ರಿಯ ನಿಗ್ರಹವಂ ಮಾಡಿ, ಮಂತ್ರ ಮಂತ್ರ ಮಥನದ ಹೋಮದ ಹೊಗೆಯ ತೆಗೆದು ಚಂದ್ರಸೂರ್ಯರನಾಣೆಯಿಟ್ಟಂತೆ ಒಂದೆ ಠಾವಿನಲ್ಲಿ ನಿಲಿಸಿದೆ, ರುದ್ರಪದದಲ್ಲಿ- ಇಂತು ಕ್ರೀಯಳಿದು ನಿಃಕ್ರಿಯದಲ್ಲಿ ನಿಂದ ಕೂಡಲಚೆನ್ನಸಂಗಯ್ಯನು ಎನ್ನ ಪ್ರಾಣನಾಥನೆಂದರಿದು ಎನ್ನ ಕಾಯವ ಬಾದಿಪುದಂ ಬಿಟ್ಟು ನಿಜದಲ್ಲಿ ನಿಂದೆನು.