Index   ವಚನ - 1364    Search  
 
ಪಟವಾಕಾಶವನಡರಿತ್ತೆಂದಡೆ, ಪಟಸೂತ್ರದ ಸಂಚು ಕೆಳಗಿಪ್ಪುದು ನೋಡಾ! ವ್ಯೋಮದಲ್ಲಿ ಚರಿಸುವ ಸೋಮಸೂರ್ಯರೆಂದಡೆ ಹೇಮಗಿರಿಯ ಸಂಚ ತಪ್ಪದು ನೋಡಾ! ಭೂಮಿಯನೊಲ್ಲದೆ ಗಗನಕ್ಕೆ ಹಾರಿದವಂಗೆ, ಆ ವ್ಯೋಮದಲ್ಲಿ ನಿಲುವುದಕ್ಕೆ ಒಂದೆಡೆಯುಂಟೆ? ನಮ್ಮ ಕೂಡಲಚೆನ್ನಸಂಗನ ಶರಣರೊಳಗಿರ್ದು ಸೀಮೆಯ ಮೀರಿದ ನಿಸ್ಸೀಮನು ಸಿದ್ಧರಾಮಯ್ಯನೆಂಬ ಮಾತು ಅಂತಿರಲಯ್ಯಾ ಪ್ರಭುವೆ.