Index   ವಚನ - 1397    Search  
 
ಪ್ರಣಮ: ಪ್ರಾಣವಾಯುವಿನ ನೆಲೆಯನರಿದು ಬಿಡಬಲ್ಲರೆ, ಪ್ರಣಮ: ಓಂಕಾರದ ಶ್ರುತಿಯ ಮೂಲಾಂಕುರವನರಿಯಬಲ್ಲರೆ, ಪ್ರಣಮ: ಐವತ್ತೆರಡಕ್ಷರದ ಲಿಪಿಯ ತಿಳಿದುನೋಡಿ ಓದಬಲ್ಲರೆ, ಪ್ರಣಮ: ನಾದಬಿಂದು ಕಲಾತೀತನಾಗಬಲ್ಲರೆ- ಇದು ಕಾರಣ, ಕೂಡಲಚೆನ್ನಸಂಗಾ, ನಿಮ್ಮ ಶರಣರು ಸಹಸ್ರವೇದಿಗಳಾದ ಕಾರಣ ಪ್ರಣಮಪ್ರತಿಷ್ಠಾಚಾರ್ಯರು. ಅವರಿಗೆ ಮಿಗೆ ಮಿಗೆ ನಮೋ ನಮೋ ಎಂಬೆನು.