Index   ವಚನ - 1399    Search  
 
ಪ್ರಮಥದಲ್ಲಿ ಪಾದೋದಕ, ದ್ವಿತೀಯದಲ್ಲಿ ಲಿಂಗೋದಕ, ತೃತೀಯದಲ್ಲಿ ಮಜ್ಜನೋದಕ, ಚತುರ್ಥದಲ್ಲಿ ಸ್ಪರ್ಶನೋದಕ, ಪಂಚಮದಲ್ಲಿ ಅವಧಾನೋದಕ, ಷಷ್ಠದಲ್ಲಿ ಆಪ್ಯಾಯನೋದಕ, ಸಪ್ತಮದಲ್ಲಿ ಹಸ್ತೋದಕ, ಅಷ್ಟಮದಲ್ಲಿ ಪರಿಣಾಮೋದಕ, ನವಮದಲ್ಲಿ ನಿರ್ನಾಮೋದಕ, ದಶಮದಲ್ಲಿ ಸತ್ಯೋದಕ,- ಇಂತೀ ದಶವಿಧಪಾದೋದಕವ ತಿಳಿದುಕೊಳಬಲ್ಲ ಕೂಡಲಚೆನ್ನಸಂಗಾ ನಿಮ್ಮ ಶರಣ.