Index   ವಚನ - 1433    Search  
 
ಬೇಕು ಬೇಡೆನ್ನದ ಪ್ರಸಾದಿಯ ಕಾಯ, ಲಿಂಗಾರ್ಪಿತ, ಆ ಅರ್ಪಿತವೆ ಪ್ರಸಾದ, ಅದೆ ಮತ್ತೆ ಮತ್ತೆ ಅರ್ಪಿತ, ದರ್ಶನದಿಂದಾಯಿತ್ತು, ಸ್ಪರ್ಶನದಿಂದಾಯಿತ್ತು. ಅರ್ಪಿಸಿ, ಸೋಂಕನರ್ಪಿಸಲರಿಯದಿರ್ದಡದು ಭ್ರಾಂತು. ಕೂಡಲಚೆನ್ನಸಂಗನ ಪ್ರಸಾದಿಯ ಪ್ರಸಾದವನತಿಗಳೆದಡೆ ಮುಂದೆ ಅದಕ್ಕೆಂತೊ.