Index   ವಚನ - 1439    Search  
 
ಬ್ರಹ್ಮ ತಲೆದೋರದಂದು, ವಿಷ್ಣು ಉದಯಿಸದಂದು ರುದ್ರನವತರಿಸದಂದು, ಈರೇಳುಭುವನ ನೆಲೆಗೊಳ್ಳದಂದು, ಸಪ್ತಸಾಗರಂಗಳುಕ್ಕಿ ಹರಿಯದಂದು, ಅಮೃತಮಥನವಿಲ್ಲದಂದು, ಮೂವತ್ತುಮೂರುಕೋಟಿ ದೇವರ್ಕಳಿಲ್ಲದಂದು ಮುನ್ನಾರು ಬಲ್ಲರು? ಮುನ್ನಾರು ಬಲ್ಲರು? ಆದಿಮೂಲಸ್ವಾಮಿ ಕೂಡಲಚೆನ್ನಸಂಗಯ್ಯ ಹಮ್ಮಿಲ್ಲದಿರ್ದನಂದು.