Index   ವಚನ - 1442    Search  
 
ಬ್ರಾಹ್ಮಣ ಭಕ್ತನಾದರೇನಯ್ಯಾ? ಸೂತಕಪಾತಕಂಗಳ ಬಿಡ. ಕ್ಷತ್ರಿಯ ಭಕ್ತನಾದರೇನಯ್ಯಾ? ಕ್ರೋಧವ ಬಿಡ. ವೈಶ್ಯ ಭಕ್ತನಾದರೇನಯ್ಯಾ? ಕಪಟವ ಬಿಡ. ಶೂದ್ರ ಭಕ್ತನಾದರೇನಯ್ಯಾ? ಸ್ವಜಾತಿಯೆಂಬುದ ಬಿಡ. ಇಂತೀ ಜಾತಿಡಂಭಕರ ಮೆಚ್ಚುವನೆ ಕೂಡಲಚೆನ್ನಸಂಗಮದೇವ.