Index   ವಚನ - 1443    Search  
 
ಬ್ರಹ್ಮಾಬ್ರಹ್ಮರಿಲ್ಲದಂದು, ವಿಷ್ಣು ಮಾಯಾಜಾಲವಿಲ್ಲದಂದು, ಸೃಷ್ಟ್ಯಸೃಷ್ಟಿಯಿಲ್ಲದಂದು, ಕಾಳಿಂಗ ಕರೆಕಂಠರಿಲ್ಲದಂದು, ಉಮೆಯ ಕಲ್ಯಾಣವಿಲ್ಲದಂದು, ದ್ವಾದಶಾದಿತ್ಯರಿಲ್ಲದಂದು, ನಂದಿಕೇಶ್ವರನಿಲ್ಲದಂದು, ಲಿಂಗಸ್ಥಲ ಜಂಗಮಸ್ಥಲ ಪ್ರಸಾದಿಸ್ಥಲವಿಲ್ಲದಂದು, ದೇಹಾಹಂಕಾರ ಪ್ರಕೃತಿಯಿಲ್ಲದಂದು, ಕೂಡಲಚೆನ್ನಸಂಗಯ್ಯ ತಾನೆನ್ನದಿರ್ದನಂದು.