Index   ವಚನ - 1508    Search  
 
ಮಹಾಕಾಲದಲ್ಲಿ ನಿಮ್ಮಿಂದ ನೀವೆ ಸ್ವಯಂಭುವಾಗಿರ್ದಿರಯ್ಯಾ, ಒಂದನಂತಕಾಲ. ಮಹವು ಮಹಾನಂದದಲಕ್ಕಾಡಿ, ಮತ್ತಲ್ಲಿಯೆ ಲೀಯವಾಗಿರ್ದುದು ಒಂದನಂತಕೋಟಿ ವರುಷ, ಕೂಡಲಚೆನ್ನಸಂಗಮದೇವ ವಿಪರೀತಚಾರಿತ್ರ.