Index   ವಚನ - 1519    Search  
 
ಮಾಡುವ ಸದಾಚಾರಕ್ಕೆ ಮೊದಲನೆಯ ಲಿಂಗಪೂಜೆಯೆ ಗುರುಪೂಜೆ. ಮಾಡುವ ಸದಾಚಾರಕ್ಕೆ ಎರಡನೆಯ ಲಿಂಗಪೂಜೆಯೆ ಲಿಂಗಪೂಜೆ. ಮಾಡುವ ಸದಾಚಾರಕ್ಕೆ ಮೂರನೆಯ ಲಿಂಗಪೂಜೆಯೆ ಜಂಗಮಪೂಜೆ. ಮಾಡುವ ಸದಾಚಾರಕ್ಕೆ ಮೂರು ಪೂಜೆ. ಈ ಪೂಜೆ ಅನಂತಜನ್ಮದುರಿತಧ್ವಂಸಿ ನೋಡಾ, ಕೂಡಲಚೆನ್ನಸಂಗಮದೇವ ಸಾಕ್ಷಿಯಾಗಿ.