Index   ವಚನ - 1536    Search  
 
ಮೆಲ್ಲಮೆಲ್ಲನೆ ಭಕ್ತ, ಮೆಲ್ಲಮೆಲ್ಲನೆ ಮಾಹೇಶ್ವರ, ಮೆಲ್ಲಮೆಲ್ಲನೆ ಪ್ರಸಾದಿ, ಮೆಲ್ಲಮೆಲ್ಲನೆ ಪ್ರಾಣಲಿಂಗಿ, ಮೆಲ್ಲಮೆಲ್ಲನೆ ಶರಣ, ಮೆಲ್ಲಮೆಲ್ಲನೆ ಐಕ್ಯರಾದೆವೆಂಬರು- ನಿಮ್ಮ ಶರಣರು ತಾವೇನು ಮರುಜವಣಿಯ ಕೊಂಡರೆ? ಅಮೃತಸೇವನೆಯ ಮಾಡಿದರೆ? ಆವ ಸ್ಥಲದಲ್ಲಿ ನಿಂದರೂ ಆ ಸ್ಥಲದಲ್ಲಿ ಷಡುಸ್ಥಲ ಅಳವಡದಿದ್ದರೆ, ಆ ಭಕ್ತಿಯ ಬಾಯಲ್ಲಿ ಹುಡಿಯ ಹೊಯ್ದು ಹೋಗುವೆನೆಂದ ಕೂಡಲಚೆನ್ನಸಂಗಮದೇವರು.