Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 1539 
Search
 
“ಯದಾ ಶಿವಕಲಾಯುಕ್ತಂ ಲಿಂಗಂ ದದ್ಯಾನ್ಮಹಾಗುರುಃ ತದಾರಾಭ್ಯಂ ಶಿವಸ್ತತ್ರ ತಿಷ್ಠತ್ಯಾಹ್ವಾಮತ್ರ ಕಿಂ ಸುಸಂಸ್ಕೃತೇಷು ಲಿಂಗೇಷು ಸದಾ ಸನ್ನಿಹಿತಃ ಶಿವಃ ತಥಾsಹ್ವಾನಂ ನ ಕರ್ತವ್ಯಂ ಪ್ರತಿಪತ್ತಿವಿರೋಧತಃ ನಾಹ್ವಾನಂ ನಾ ವಿಸರ್ಗಂ ಚೆ ಸ್ವೇಷ್ಟಲಿಂಗೇ ಕಾರಯೇತ್ ಲಿಂಗನಿಷ್ಠಾಪರೋ ನಿತ್ಯಮಿತಿ ಶಾಸ್ತ್ರವಿನಿಶ್ಚಯಃ” ಆಹ್ವಾನಕ್ಕೋಸ್ಕರವಾಗಿ ಎಲ್ಲಿರ್ದನು? ಈರೇಳು ಭುವನ ಹದಿನಾಲ್ಕು ಲೋಕವ ನೊಡಲುಗೊಂಡಿಪ್ಪ ದಿವ್ಯವಸ್ತು ಮತ್ತೆ ವಿಸರ್ಜಿಸಿ ಬಿಡುವಾಗ ಎಲ್ಲಿರ್ದನು? ಮುಳ್ಳೂರೆ ತೆರಹಿಲ್ಲದಂತಿಪ್ಪ ಅಖಂಡವಸ್ತು! “ಆಕಾಶಂ ಲಿಂಗಮಿತ್ಯಾಹುಃ ಪೃಥಿವೀ ತಸ್ಯ ಪೀಠಿಕಾ ಆಲಯಂ ಸರ್ವಭೂತಾನಾಂ ಅಯನಂ ಲಿಂಗಮುಚ್ಯತೇ ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ ಲಿಂಗಬಾಹ್ಯಾತ್ಪರಂ ನಾಸ್ತಿ ತಸ್ಮಾಲ್ಲಿಂಗಂ ಪ್ರಪೂಜಯೇತ್ ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ ನಾದಬಿಂದುಕಲಾತೀತಂ ಗುರುಣಾ ಲಿಂಗಮುದ್ಭವಂ ವೇದಾದಿನಾಮ ನಿರ್ನಾಮ ಮಹತ್ವಂ ಮಮ ರೂಪಯೋಃ ಗುರೂಕ್ತಮಂತ್ರಮಾರ್ಗೇಣ ಇಷ್ಟಲಿಂಗಂ ತು ಶಾಂಕರಿ” ಇಂತೆಂದುದಾಗಿ, ಬರಿಯ ಮಾತಿನ ಬಳಕೆಯ ತೂತುಜ್ಞಾನವ ಬಿಟ್ಟು ನೆಟ್ಟನೆ ತನ್ನ ಕರಸ್ಥಲದೊಳ್ ಒಪ್ಪುತಿರ್ಪ ಇಷ್ಟಲಿಂಗವ ದೃಷ್ಟಿಸಿ ನೋಡಲು ಅಲ್ಲಿ ತನ್ನ ಮನಕ್ಕೆ ಮನ ಸಂಧಾನವಾದ ದಿವ್ಯ ನಿಶ್ಚಯ ಒದಗಿ, ಆ ದಿವ್ಯ ನಿಶ್ಚಯದಿಂದ ವ್ಯಾಕುಳವಡಗಿ ಅದ್ವೈತವಪ್ಪುದು. ಅದು ಕಾರಣ, ನಮ್ಮ ಕೂಡಲಚೆನ್ನಸಂಗಯ್ಯನ ಶರಣರು ಆಹ್ವಾನ-ವಿಸರ್ಜನವೆಂಬ ಉಭಯ ಜಡತೆಯ ಬಿಟ್ಟು ತಮ್ಮ ತಮ್ಮ ಕರಸ್ಥಲದಲ್ಲಿ ನಿಶ್ಚಯಿಸಿದರಾಗಿ ಸ್ವಯಲಿಂಗವಾದರು ಕಾಣಿರೋ.
Art
Manuscript
Music
Your browser does not support the audio tag.
Courtesy:
Video
Transliteration
“Yadā śivakalāyuktaṁ liṅgaṁ dadyānmahāguruḥ tadārābhyaṁ śivastatra tiṣṭhatyāhvāmatra kiṁ susanskr̥tēṣu liṅgēṣu sadā sannihitaḥ śivaḥ tathāshvānaṁ na kartavyaṁ pratipattivirōdhataḥ nāhvānaṁ nā visargaṁ ce svēṣṭaliṅgē kārayēt liṅganiṣṭhāparō nityamiti śāstraviniścayaḥ” āhvānakkōskaravāgi ellirdanu? Īrēḷu bhuvana hadinālku lōkava noḍalugoṇḍippa divyavastu matte visarjisi biḍuvāga ellirdanu? Muḷḷūre terahilladantippa akhaṇḍavastu! “Ākāśaṁ liṅgamityāhuḥ pr̥thivī tasya pīṭhikā Ālayaṁ sarvabhūtānāṁ ayanaṁ liṅgamucyatē liṅgamadhyē jagatsarvaṁ trailōkyaṁ sacarācaraṁ liṅgabāhyātparaṁ nāsti tasmālliṅgaṁ prapūjayēt yatō vācō nivartantē aprāpya manasā saha nādabindukalātītaṁ guruṇā liṅgamudbhavaṁ vēdādināma nirnāma mahatvaṁ mama rūpayōḥ gurūktamantramārgēṇa iṣṭaliṅgaṁ tu śāṅkari” intendudāgi, bariya mātina baḷakeya tūtujñānava biṭṭu neṭṭane tanna karasthaladoḷ opputirpa iṣṭaliṅgava dr̥ṣṭisi nōḍalu Alli tanna manakke mana sandhānavāda divya niścaya odagi, ā divya niścayadinda vyākuḷavaḍagi advaitavappudu. Adu kāraṇa, nam'ma kūḍalacennasaṅgayyana śaraṇaru āhvāna-visarjanavemba ubhaya jaḍateya biṭṭu tam'ma tam'ma karasthaladalli niścayisidarāgi svayaliṅgavādaru kāṇirō.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Transliteration
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: