Index   ವಚನ - 1542    Search  
 
ರಚನೆ ರಂಜಕವ ನುಡಿವಾತ ಜಂಗಮವಲ್ಲ. ನರರ ಹೊಗಳಿ ಹಾಡಿ ಬೇಡುವಾತ ಜಂಗಮವಲ್ಲ. ನರರ ಕೈವಾರಿಸುವಾತ ಜಂಗಮವಲ್ಲ. ಇದು ಕಾರಣ-ಕೂಡಲಚೆನ್ನಸಂಗಯ್ಯನಲ್ಲಿ ಪ್ರಭುವೇ ಜಂಗಮ, ಬಸವಣ್ಣನೇ ಭಕ್ತ.