Index   ವಚನ - 1550    Search  
 
ರೂಪಾಗಿ ಬಂದುದ ಕಾಯದ ಕೈಯಲ್ಲಿ ಕೊಡುವುದು, ರುಚಿಯಾಗಿ ಬಂದುದ ಮನದ ಕೈಯಲ್ಲಿ ಕೊಡುವುದು, ತೃಪ್ತಿಯಾಗಿ ಬಂದುದ ಭಾವದ ಕೈಯಲ್ಲಿ ಕೊಡುವುದು, ಅರ್ಪಿಸುವ ತೆರನಿದು ಪ್ರಸಾದಿಗಯ್ಯಾ. "ಇಷ್ಟಲಿಂಗಾರ್ಪಿತಂ ರೂಪಂ ರುಚಿಃ ಪ್ರಾಣಸಮರ್ಪಿತಾ| ತೃಪ್ತಿರ್ಭಾವಸಮಾಯುಕ್ತಾ ಅರ್ಪಿತಂ ತ್ರಿವಿಧಾತ್ಮಕಂ"|| ಎಂದುದಾಗಿ, ರೂಪು ರುಚಿ ತೃಪ್ತಿಯ ಕೊಡಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಮಹಾಪ್ರಸಾದಿಯಯ್ಯಾ.