Index   ವಚನ - 1575    Search  
 
ಲಿಂಗಭಕ್ತನ ವಿವಾಹದಲ್ಲಿ ಶಿವಗಣಂಗಳಿಗೆ ವಿಭೂತಿವೀಳೆಯವ ಕೊಟ್ಟು ಆರೋಗಣೆಯ ಮಾಡಿಸಿ ಶಿವಗಣಂಗಳು ಸಾಕ್ಷಿಯಾಗಿ ಪ್ರಸಾದವನಿಕ್ಕುವುದೆ ಸದಾಚಾರವಲ್ಲದೆ, ವಾರ ತಿಥಿ ಸುಮುಹೂರ್ತವೆಂಬ ಲೌಕಿಕದ ಕರ್ಮವ ಮಾಡಿದಡೆ ನಿಮ್ಮ ಸದ್ಭಕ್ತರಿಗೆ ದೂರವಯ್ಯಾ ಕೂಡಲಚೆನ್ನಸಂಗಮದೇವಾ.