Index   ವಚನ - 1594    Search  
 
ಲೋಕದ ಡೊಂಕ ನೀವು ತಿದ್ದುವಿರಯ್ಯ. ನಿಮ್ಮ ತನುಮನದ ಡೊಂಕ ತಿದ್ದಿ ತೀಡಿಕೊಳಲರಿಯದೆ. ಪುರಾತನರು ನುಡಿದಂತೆ ನಡೆಯದವರೆಲ್ಲ, ಕಡು ಓದಿದ ಗಿಳಿ ತನ್ನ ಮಲವ ತಾ ತಿಂದಂತೆ. ನೆರೆಮನೆಯವರ ದುಃಖವ ಕೇಳಿ, ಗಡ್ಡ ಮೀಸೆ ಮಂಡೆಯ ಬೋಳಿಸಿಕೊಂಡು ಕಡೆಯಲ್ಲಿ ಹೋಗಿ ಅಳುತಿಪ್ಪವರ ಕಂಡರೆ ಕೂಡಲಚೆನ್ನಸಂಗನ ಶರಣರು ನಗುತಿಪ್ಪರಯ್ಯಾ.