Index   ವಚನ - 1615    Search  
 
ವೇದವನೋದುವ ಅಣ್ಣಗಳು ನೀವು ಕೇಳಿರೊ! ವೇದ ವೇದಿಸಲಿಲ್ಲ ಶಾಸ್ತ್ರ ಸಾಧಿಸಲಿಲ್ಲ; ಪುರಾಣ ಪೂರೈಸಲಿಲ್ಲ, ಆಗಮಕ್ಕೆ ಆದಿಯಿಲ್ಲ. ಇದು ಕಾರಣ- ಆದ್ಯರಲ್ಲ, ವೇದ್ಯರಲ್ಲ, ಸಾಧ್ಯರಲ್ಲ ಬರಿಯ ಹಿರಿಯರು ನೋಡಾ, ಕೂಡಲಚೆನ್ನಸಂಗಮದೇವಾ.