Index   ವಚನ - 1658    Search  
 
ಶೀಲಶೀಲವೆಂಬ ಅಣ್ಣಗಳ ನೀವು ಕೇಳಿರೊ: ಕಾಮ ಒಂದನೆಯ ಭವಿ, ಕ್ರೋಧ ಎರಡನೆಯ ಭವಿ, ಲೋಭ ಮೂರನೆಯ ಭವಿ, ಮೋಹ ನಾಲ್ಕನೆಯ ಭವಿ, ಮದ ಐದನೆಯ ಭವಿ, ಮತ್ಸರ ಆರನೆಯ ಭವಿ. ಇಂತೀ ಷಡ್ವಿಧಭವಿಯ ತಮ್ಮ ಎದೆಯೊಳಗೆ ಇಂಬಿಟ್ಟುಕೊಂಡು ಅಂಗದ ಮೇಲೆ ಅವರಿಗೆ ಲಿಂಗವುಂಟೊ? ಇಲ್ಲವೊ? ಎಂಬ ಜಗಭಂಡರು ನೀವು ಕೇಳಿರೊ: ಅಚ್ಚಪ್ರಸಾದಿ ನಿಚ್ಚಪ್ರಸಾದಿ! ಜಲವನೆ ಹೊಕ್ಕು ಕನ್ನವನಿಕ್ಕಿ ಅಗ್ಗಣಿಯ ತಂದು ಮಜ್ಜನಕ್ಕೆ ನೀಡುವ ಹಗಲುಗಳ್ಳರ ಮೆಚ್ಚುವನೆ ಕೂಡಲಚೆನ್ನಸಂಗಮದೇವ.