Index   ವಚನ - 1725    Search  
 
ಸ್ಥೂಲತನು ಸೂಕ್ಷ್ಮತನು ಕಾರಣ ತನು: ಸ್ಥೂಲತನುವಿನಲ್ಲಿ ಇಷ್ಟಲಿಂಗಪ್ರತಿಷ್ಠೆ, ಸೂಕ್ಷ್ಮತನುವಿನಲ್ಲಿ ಪ್ರಾಣಲಿಂಗಪ್ರತಿಷ್ಠೆ, ಕಾರಣತನುವಿನಲ್ಲಿ ತೃಪ್ತಿಲಿಂಗಪ್ರತಿಷ್ಠೆ. ಇಂತೀ ಸ್ಥೂಲ ಸೂಕ್ಷ್ಮ ಕಾರಣವು ಮಹವು! ಮಹದುದಯ ಹೃದಯದಲ್ಲಿ ಕೊನೆದೋರುತ್ತಿಪ್ಪ ಪರಂಜ್ಯೋತಿ, ನಿಮ್ಮ ಶರಣನ ಸರ್ವಾಂಗದಲುಂಟು ಕೂಡಲಚೆನ್ನಸಂಗಮದೇವಾ.