Index   ವಚನ - 1731    Search  
 
ಹಗಲು ನಾಲ್ಕು ಜಾವ ಅಶನಕ್ಕೆ ಕುದಿವರು ಇರುಳು ನಾಲ್ಕು ಜಾವ ವ್ಯಸನಕ್ಕೆ ಕುದಿವರು. ಅಷ್ಟವಿಧಾರ್ಚನೆ ಷೋಡಶೋಪಚಾರ ಎಂಬರಲ್ಲದೆ ತಮ್ಮನಿಕ್ಕಿ ನಿಧಾನವ ಸಾಧಿಸುವರ ಆರನೂ ಕಾಣೆ, ಕೂಡಲಚೆನ್ನಸಂಗಮದೇವಾ.