Index   ವಚನ - 187    Search  
 
ಓಂಕಾರವೆಂಬ ಲಿಂಗದಲ್ಲಿ ನುಡಿದಾಡುವನಾರಯ್ಯ? ನೋಡುವನಾರಯ್ಯ? ಕೊಂಬುವನಾರಯ್ಯ? ಇಂತೀ ಭೇದವರಿತು ಸದಾಶಿವಲಿಂಗದಲ್ಲಿ ನೆಲೆಯಂಗೊಂಡು ಐದು ಅಂಗವ ಗರ್ಭಿಕರಿಸಿಕೊಂಡು ಈಶ್ವರನೆಂಬ ಮೆಟ್ಟಿಗೆಯ ಮೆಟ್ಟಿ ಬ್ರಹ್ಮ ವಿಷ್ಣು ರುದ್ರಾದಿಗಳೆಂಬ ಭವಸಾಗರವ ಹರಿದು ಒಂಬತ್ತು ನೆಲೆಯ ಮೇಲೆ ನಡೆದು ಹೋಗುವ ಗಂಭೀರ ನಿರವಯನೆಂಬ[ನ] ಸತಿಯಳುವಿಡಿದು ಎಂತಿರ್ದಂತಿರ್ದಳು ನೋಡಾ ಝೇಂಕಾರ ನಿಜಲಿಂಗಪ್ರಭುವೆ