ಇಪ್ಪತ್ತೈದು ಕಂಬದ ಶಿವಾಲಯದೊಳಗೆ
ಒಬ್ಬ ಅಂಗನೆ, ಹದಿನೆಂಟು ಕೇರಿಗಳಲ್ಲಿ
ಸುಳಿದಾಡುತಿರ್ಪಳು ನೋಡಾ,
ಮೇಲಣ ದಾರಿಯಲ್ಲಿ ಒಬ್ಬ ಕುಂಟಣಗಿತ್ತಿಯು ಬಂದು
ಆ ಅಂಗನೆಯ ಕೈಹಿಡಿದು ಹದಿನೆಂಟು ಕೇರಿಗಳ ಕೆಡಿಸಿ
ಇಪ್ಪತ್ತೈದು ಕಂಬದ ಶಿವಾಲಯವ ಮೀರಿ
ನಿಶ್ಚಿಂತ ನಿರಾಳಲಿಂಗದಲ್ಲಿ ಬೆರೆದಿರ್ಪಳು ನೋಡಾ
ಝೇಂಕಾರ ನಿಜಲಿಂಗಪ್ರಭುವೆ.