Index   ವಚನ - 305    Search  
 
ಕತ್ತಲೆ ಮನೆಯೊಳಗೆ ಬೆಳಗುಂಟೇನಯ್ಯ? ಆ ಕತ್ತಲೆ ಮನೆಯೊಳಗೆ ಜ್ಯೋತಿಯ ಮುಟ್ಟಿಸಲು ಕತ್ತಲೆ ಹರಿದುಹೋಯಿತ್ತು ನೋಡಾ. ಈ ಪರಿಯಾದಲ್ಲಿ ಮನವೆಂಬ ಕತ್ತಲೆಯಲ್ಲಿ ಜ್ಞಾನವೆಂಬ ಜ್ಯೋತಿಯ ಮುಟ್ಟಿಸಲು ಒಳಹೊರಗೆ ಪರಿಪೂರ್ಣವಾಗಿ ಬೆಳಗಾಯಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.