ಧರೆಯ ಮೇಲೆ ಹರಡಿರುವ ಶಿಲೆಯ ತಂದು
ಕಲ್ಲುಕುಟಿಕ ಕಟೆದು ಲಿಂಗವ ಮಾಡಿದರೆ
ಅದೆಂತು ಲಿಂಗವೆಂಬೆನಯ್ಯ?
ಅದು ಶಿಲೆಯು.
ಆ ಲಿಂಗವ ತಂದು, ಗುರುವಿನ ಕೈಯಲ್ಲಿ ಕೊಟ್ಟು
ದೀಕ್ಷೆ ಉಪದೇಶವಂ ಮಾಡಿ,
ಆ ಲಿಂಗವ ಧರಿಸಿಕೊಂಡು
ಗುರು ಲಿಂಗ ಜಂಗಮ ಪಾದೋದಕ ಪ್ರಸಾದವ ಸ್ವೀಕರಿಸಿ,
ಶಿಲಾಲಿಖಿತವ ತೊಡೆದು ಕಲಾಭೇದವನರಿದು
ಇಷ್ಟಲಿಂಗ ಪ್ರಾಣಲಿಂಗ ಭಾವಲಿಂಗವೆಂಬ ಲಿಂಗತ್ರಯಗಳನರಿದು
ಇರಬಲ್ಲ ಶರಣರ ಎನಗೊಮ್ಮೆ ತೋರಿಸಯ್ಯ
ಝೇಂಕಾರ ನಿಜಲಿಂಗಪ್ರಭುವೆ.