Index   ವಚನ - 413    Search  
 
ವೇದ ದೊಡ್ಡದೆಂದು ನುಡಿವ ವಾದಿಯ ಮಾತ ಹೇಳಲಾಗದು ಕೇಳಲಾಗದು. ಶಾಸ್ತ್ರ ದೊಡ್ಡದೆಂದು ನುಡಿವ ಪಾತಕನ ಮಾತ ಹೇಳಲಾಗದು ಕೇಳಲಾಗದು. ಪುರಾಣ ದೊಡ್ಡದೆಂದು ನುಡಿವ ಪುಂಡರ ಮಾತ ಹೇಳಲಾಗದು ಕೇಳಲಾಗದು. ಆಗಮ ದೊಡ್ಡದೆಂದು ನುಡಿವ ಅಹಂಕಾರಿಯ ಮಾತ ಹೇಳಲಾಗದು ಕೇಳಲಾಗದು. ಜ್ಯೋತಿಷ್ಯ ದೊಡ್ಡದೆಂದು ನುಡಿವ ಘಾತುಕನ ಮಾತ ಹೇಳಲಾಗದು, ಕೇಳಲಾಗದು. ಅದೇನು ಕಾರಣವೆಂದಡೆ, ತನ್ನ ಅಂತರಂಗದಲ್ಲಿ ಪರಬ್ರಹ್ಮದ ನಿಲವ ಅರಿತ ಮಹಾತ್ಮಂಗೆ ಇನ್ನೆಲ್ಲಿಯ ವೇದವೋ? ಇನ್ನೆಲ್ಲಿಯ ಶಾಸ್ತ್ರವೋ? ಇನ್ನೆಲ್ಲಿಯ ಪುರಾಣವೋ? ಇನ್ನೆಲ್ಲಿಯ ಆಗಮವೋ? ಇನ್ನೆಲ್ಲಿಯ ಜ್ಯೋತಿಷ್ಯವೋ? ಇಂತೀ ಇವಕ್ಕೆ ಸಿಲ್ಕದೆ ಅತ್ತತ್ತಲೆಯಾಗಿರ್ದನಯ್ಯ ನಿಮ್ಮ ಶರಣನು ಝೇಂಕಾರ ನಿಜಲಿಂಗಪ್ರಭುವೆ.