Index   ವಚನ - 421    Search  
 
ಆಧಾರ ಸ್ವಾಧಿಷ್ಠಾನ ಮಣಿಪೂರಕ ಅನಾಹತ ವಿಶುದ್ಧಿ ಆಜ್ಞೇಯಯೆಂಬ ಷಡುಸ್ಥಲಕ್ಕೆ ಷಡ್ವಿಧಮೂರ್ತಿಗಳಿಪ್ಪವು ನೋಡಾ. ಅದು ಹೇಗೆಂದಡೆ : ಆಧಾರದಲ್ಲಿ ಬ್ರಹ್ಮನೆಂಬ ಮೂರ್ತಿ, ಸ್ವಾಧಿಷ್ಠಾನದಲ್ಲಿ ವಿಷ್ಣುವೆಂಬ ಮೂರ್ತಿ, ಮಣಿಪೂರಕದಲ್ಲಿ ರುದ್ರನೆಂಬ ಮೂರ್ತಿ, ಅನಾಹತದಲ್ಲಿ ಈಶ್ವರನೆಂಬ ಮೂರ್ತಿ, ವಿಶುದ್ಧಿಯಲ್ಲಿ ಸದಾಶಿವನೆಂಬ ಮೂರ್ತಿ, ಆಜ್ಞೇಯದಲ್ಲಿ ಪರಶಿವನೆಂಬ ಮೂರ್ತಿ, ಇಂತೀ ಭೇದವ ಮರೆತು ಇರಬಲ್ಲಾತನೆ ನಿಮ್ಮ ಶರಣ ನೋಡಾ ಝೇಂಕಾರ ನಿಜಲಿಂಗಪ್ರಭುವೆ.