Index   ವಚನ - 737    Search  
 
ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಪರಶಿವನಿಂದತ್ತತ್ತ, ಮಹಾಜ್ಞಾನದ ಬೆಳಗು, ಸ್ವಯಜ್ಞಾನದ ತಂಪು, ನಿರಂಜನದ ಸುಖ, ಆ ಸುಖದೊಳು ಕೂಡಿ, ಪರಿಪೂರ್ಣವಾದ ಶರಣರ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.