Index   ವಚನ - 746    Search  
 
ಕುಲಛಲಕ್ಕೆ ಹೋರಿ ಆಡುವರೆಲ್ಲ ಶಿವಭಕ್ತರೆ? ಶಿವಭಕ್ತರಲ್ಲ ; ಅವರು ಕುಲದ ಪಾತಕರು. ಅವರಿಂಗೆ ಗುರುವಿಲ್ಲ, ಲಿಂಗವಿಲ್ಲ, ಜಂಗಮವಿಲ್ಲ, ಪಾದೋದಕ-ಪ್ರಸಾದವಿಲ್ಲ, ವಿಭೂತಿ-ರುದ್ರಾಕ್ಷಿಯಿಲ್ಲ, ಓಂ ನಮಃ ಶಿವಾಯವೆಂಬ ಮಂತ್ರವಿಲ್ಲ. ಇಂತೀ ಕುಲ ಛಲಂಗಳ ಬಿಟ್ಟು, ನಿರ್ಮಲಸ್ವರೂಪನಾಗಿ, ಗುರುಕಾರುಣ್ಯದಿಂದ ಜ್ಞಾನಸಂಬಂಧಿಯಾಗಿ, ಅಷ್ಟಾವರಣವನಾಚರಿಸಬಲ್ಲಾತನೆಭಕ್ತನೆಂಬೆನಯ್ಯ, ಮಹೇಶ್ವರನೆಂಬೆನಯ್ಯ, ಪ್ರಸಾದಿಯೆಂಬೆನಯ್ಯ, ಪ್ರಾಣಲಿಂಗಿಯೆಂಬೆನಯ್ಯ, ಶರಣನೆಂಬೆನಯ್ಯ, ಐಕ್ಯನೆಂಬೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.